Tuesday 1 June 2021

why don't you be YOU and ONLY YOU not like others


thoughts

Why don't you be YOU and ONLY YOU, not like OTHERS

This has been told in a better and simplest way in our Sanatana Dharma long long ago.

We had this story in our Sanskrit Curriculum in High School. I cannot forget this shloka and story as the story influenced me.

A poor person/Sadhu who was on a pilgrimage and  wished to take bath in Ganges river, was alone, had a copper vessel with some money in it and wanted his money to be safe while taking bath. So he thought of a plan, prepared a शिवलिंग from sand and put a couple of flowers on it. He had hid the money under the शिवलिंग. Pilgrims saw the man preparing शिवलिंग and thought that they would get more पुण्य if they also had followed this man. So all pilgrims started preparing the शिवलिंग before going for a bath.

By the time the man/sadhu returned to find his prepared शिवलिंग,  he was shocked to see the innumerable शिवलिंग there. He couldn't trace his शिवलिंग nor could check any शिवलिंग as everyone was continuing the preparation. Then he uttered this shloka..

गतानुगतिको लोकः    

न लोकः पारमार्थिकः |

गंगा सैकतलिंगेन नश्टम्

मे तामृभाजनम् ||

(meaning - I lost money because people just follow others, moral- don't follow others..without applying brain)

In today's world, people want to show off, want to be recognised, want others to praise them, or just carry/follow the trend etc. A classic example is  conduct of any ceremony like marriage, birthday etc..

The reason is either to show off and prove capacity OR follow because of fear that society would think otherwise.

When are we going to change ? Why not be unique in our thoughts and lifestyle?

end

**

ಪರರ ಚಿಂತೆ ನಮಗೇಕೆ ಎನ್ನುವ ಮನುಷ್ಯ ಯಾವಾಗಲೂ ಪರರ ಚಿಂತೆಯನ್ನೆ ಮಾಡುವುದು ಸಹಜ. ತನಗೆ ಸಿಕ್ಕದ್ದು ಬೇರೆಯವರಿಗೆ ಸಿಗಬಾರದು ಎನ್ನುವುದಕ್ಕೆ  ಹಾಗೆಯೇ ನಾವು ಎಲ್ಲಿ ಸೋತಿರುತ್ತೇವೆ ಅದಕ್ಕಿದೆ ಇಲ್ಲೊಂದು ದೃಷ್ಟಾಂತ.

ಎಲ್ಲೋ ಕೇಳಿದ್ದು - ಒಂದು ದಿನ ಯಮಧರ್ಮರಾಯ ಒಂದು ವ್ಯಕ್ತಿಯ ಪ್ರಾಣವನ್ನು ಕೊಂಡೊಯ್ಯಲು ಭೂಮಿಗೆ ಬಂದ. ಆದರೆ ಪ್ರಾಣ ಕೊಂಡೊಯ್ಯಬೇಕಾಗಿದ್ದ ವ್ಯಕ್ತಿಯೇ ಯಮಧರ್ಮನಿಗೆ ಎದುರಾದ. ಯಮನಿಗೆ ಭೂಲೋಕ ಸುತ್ತಿ ಸುತ್ತಿ ದಾಹವಾಗಿರುತ್ತು. ಅವನಿಗೆ ಕುಡಿಯಲು ನೀರು ಕೇಳುತ್ತಾನೆ. ಸಾಯಬೇಕಾರುವ ವ್ಯಕ್ತಿಯೇ ನೀರು ಕೊಟ್ಟು ದಾಹ ತೀರಿಸುತ್ತಾನೆ. 

ಆದರೆ ಯಮ ಕೊಂಡೊಯ್ಯಬೇಕಾರುವ  ವ್ಯಕ್ತಿ ಅವನೇ ಎಂದು ತಿಳಿದು ಒಂದು ವರ ಕೊಡುತ್ತಾನೆ. ಏನೆಂದರೆ ಒಂದು ಹಣೆಬರಹದ ಪುಸ್ತಕ ಕೊಟ್ಟು ಇದರಲ್ಲಿ ನಿನಗೆ ಅಂತ ಒಂದು ಹಾಳೆ ಇದೆ, ನಿನಗೆ ಏನು ಬೇಕೋ ಅದನ್ನು ಬರೆದುಕೊ. ನೀನು ಏನು ಬರೆದುಕೊಂಡರೂ ನೆರವೇರುವುದು. ಇದರಲ್ಲಿ ಸಂಶಯವಿಲ್ಲ. ಆದರೆ ನೀನು ಬರೆದುಕೊಳ್ಳಲು ನಿನಗೆ ಐದು ನಿಮಿಷ ಮಾತ್ರ ಸಮಯ, ಆ ಐದು ನಿಮಿಷವೇ ನಿನಗೇ ಅತ್ಯಮೂಲ್ಯ, ಆ ಐದು ನಿಮಿಷ ದಾಟಿದ ನಂತರ ನಿನ್ನ ಹಣೆಬರಹ ಹೇಗಿರುತ್ತೋ ಹಾಗಾಗುವುದು ಎಂದು ಹೇಳಿ ಒಂದು ಪುಸ್ತಕ ಕೊಡುತ್ತಾನೆ. 

ಆ ವ್ಯಕ್ತಿ ಪುಸ್ತಕ ತೆಗೆದ ತಕ್ಷಣ ಮೊದಲ ಪುಟ ಓದುತ್ತಾನೆ, ಅದರಲ್ಲಿ ನಿನ್ನ ಸ್ನೇಹಿತ ವಿದೇಶಕ್ಕೆ ಹೋಗುತ್ತಾನೆ ಎಂದಿರುತ್ತದೆ. ಅದಕ್ಕೆ ಅವನು ವಿದೇಶಕ್ಕೆ ಹೋಗಬಾರದೆಂದು ಬರೆದು ತಡೆಯುತ್ತಾನೆ.... ಮತ್ತೊಂದು ಪುಟ ತೆರೆಯುತ್ತಾನೆ ಅದರಲ್ಲಿ ಮತ್ತೊಬ್ಬ ಸ್ನೇಹಿತ ಲಕ್ಷಗಟ್ಟಲೆ ಲಾಟರಿ ಗೆಲ್ಲುತ್ತಾನೆಂದಿರುತ್ತದೆ. ಆದರೆ ಆ ವ್ಯಕ್ತಿ ಅವನಿಗೆ ಲಾಟರಿ ಸಿಗಬಾರದು ಎಂದು ಬರೆಯುತ್ತಾನೆ. 

ಮತ್ತೊಂದು ಪುಟ ತೆರೆಯುತ್ತಾನೆ. ಅದರಲ್ಲಿ ಅವನ ಆಪ್ತ ಗೆಳತಿ ಆಗರ್ಭ ಶ್ರೀಮಂತನನ್ನು ಮದುವೆಯಾಗುತ್ತಾಳೆ ಎಂದಿರುತ್ತದೆ. ಆದರೆ ಅವನ ಆಪ್ತ ಗೆಳತಿ ಆ ಆಗರ್ಭ ಶ್ರೀಮಂತ ವ್ಯಕ್ತಿಯನ್ನು  ಮದುವೆಯಾಗಬಾರದೆಂದು ಬರೆಯುತ್ತಾನೆ. 

ಮತ್ತೊಂದು ಪುಟ ತೆರೆಯುತ್ತಾನೆ. ಪಕ್ಕದ ಮನೆಯ ರೈತ ಬೆಳೆದ ಬೆಳೆಗೆ ಒಳ್ಳೆಯ ಬೆಲೆ ಸಿಕ್ಕಿ ಸಿರಿವಂತನಾಗುತ್ತಾನೆಂದು ಇರುತ್ತದೆ. ಆದರೆ ಆ ವ್ಯಕ್ತಿ ಅವನು ಸಿರಿವಂತ ನಾಗಬಾರದು ಎಂದು ಬರೆಯುತ್ತಾನೆ. ಕೊನೆಯ ಹಾಳೆ ತೆರೆಯುತ್ತಾನೆ. ಅದು ಕಾಲಿ ಹಾಳೆಯಾಗಿರುತ್ತದೆ. ಅದರಲ್ಲಿ ಬರೆಯಬೇಕೆನ್ನುವಷ್ಟರಲ್ಲಿ  ಯಮ ಆ ಪುಸ್ತಕವನ್ನು ಕಸಿದುಕೊಳ್ಕುತ್ತಾನೆ. ಏಕೆಂದರೆ ಅವನಿಗೆ ಕೊಟ್ಟ ಐದು ನಿಮಿಷದ ಗಡುವು  ಮುಗಿದು ಹೋಗಿರುತ್ತದೆ.

ಆಗ ಯಮ ಹೇಳುತ್ತಾನೆ, "ನಿನ್ನ ಆಯಸ್ಸು ಮುಗಿದಿದೆ, ನಡೆ ಎಂದು". ಆಗ ಆ ವ್ಯಕ್ತಿ ಹೇಳುತ್ತಾನೆ ನನಗೆ ಅಂತ ನಾ ಏನು ಬರೆದುಕೊಳ್ಳಲಿಲ್ಲ ಎಂದು. ಆಗ ಯಮ ಹೇಳುತ್ತಾನೆ ನಿಮಗೆ ಅಂತ ಒಂದಷ್ಟು ವರ್ಷ ಆಯಸ್ಸು ಕೊಟ್ಟಿರುತ್ತೇವೆ. ಅದರಲ್ಲೂ ವರವೆಂದು ಒಂದೈದು ನಿಮಿಷ ಆಯಸ್ಸು ಕೊಟ್ಟರೂ ನಿಮ್ಮಬಗ್ಗೆ ಯೋಚಿಸದೆ ಪರರ ಅವನತಿಯ ಬಗ್ಗೆ ಯೋಚಿಸುತ್ತೀರಾ ಎಂದರೆ  ಏನು ಹೇಳೋಣ...., ಜೀವನವಿಡೀ ಕೊಟ್ಟರು ನೀವೇನೆಂದು ತಿಳಿಯದೆ ಪರರ ಬಗ್ಗೆ ಆಲೋಚಿಸುವವರಿಗೆ ಇಲ್ಲಿಬದುಕುವ ಹಕ್ಕಿಲ್ಲವೆಂದು ಕರೆದೊಯ್ದುಬಿಡುತ್ತಾನೆ.

ನಮಗೆ ಅಂತ ಒಂದಷ್ಟು ಹಾಳೆಗಳಿವೆ, ನಮಗೆ ಅಂತ ಒಂದಷ್ಟು ದಿನಗಳಿವೆ, ನಮಗೆ ಅಂತ ಒಂದು ಬದುಕಿದೆ, ನಮಗೆ ಅಂತ ಒಂದು ದಾರಿಯಿದೆ. ನಾವು ಪರರ ಬಗ್ಗೆ ಚಿಂತಿಸುವುದು ಬಿಟ್ಟು ನಮ್ಮಲ್ಲಿ ಸನ್ಮಾರ್ಗದ ವಿಶಿಷ್ಟತೆ ಬೆಳೆಸಿಕೊಂಡು ಇತರರಿಗೆ ಮಾರ್ಗದರ್ಶನ ತೋರುವ ಕಾಲ ಎಂದು ಬರುವುದು ?

****



end- written sometime ಇನ್ may 2021



back to  

end.

No comments:

Post a Comment